ಉಡುಪಿ
ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ
ವಾರ್ತಾ ಭಾರತಿ : 23 May, 2022

ಉಡುಪಿ, ಮೇ 23: ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು.
ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ.ಎನ್.ಸುಬ್ರಹ್ಮಣ್ಯ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)