varthabharthi


ಉಡುಪಿ

ಕನ್ನರ್ಪಾಡಿ: ಮೇ 29ಕ್ಕೆ ಅಂಬೇಡ್ಕರ್ ಭವನ ಉದ್ಘಾಟನೆ

ವಾರ್ತಾ ಭಾರತಿ : 26 May, 2022

ಉಡುಪಿ : ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭ ಮೇ 29ರಂದು ಬೆಳಗ್ಗೆ 11.30ಕ್ಕೆ ಕನ್ನರ್ಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಸಚಿವರು, ಜನಪ್ರತಿನಿಧಿಗಳು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್ ಉಪಸ್ಥಿತರಿರುವರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)