varthabharthi


ನಿಧನ

ಟಿ.ಕೆ.ಕೋಟ್ಯಾನ್

ವಾರ್ತಾ ಭಾರತಿ : 17 Jun, 2022

ಕುಂದಾಪುರ: ಕುಂದಾಪುರ ಮಾಜಿ ತಾಪಂ ಸದಸ್ಯ ಟಿ.ಕೆ. ಕೋಟ್ಯಾನ್ (೫೦) ಹೃದಯಾಘಾತದಿಂದ ಶುಕ್ರವಾರ ಮುಂಜಾನೆ ತಲ್ಲೂರಿನ ಸ್ವಗೃಹದಲ್ಲಿ ನಿಧನರಾದರು.

ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದ ಅವರು, ಪ್ರಸ್ತುತ ತಲ್ಲೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದಲ್ಲಿ ಸಹಾಯಕ ನಿರ್ವಹಣಾಧಿಕಾರಿ ಯಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂದಾಪುರ ಶ್ರೀನಾರಾಯಣ ಗುರು ಯುವಕ ಮಂಡಲ ಬೆಳ್ಳಿ ಹಬ್ಬದ ಅಧ್ಯಕ್ಷರಾಗಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಕೋಶಾಧಿಕಾರಿಯಾಗಿ, ತಲ್ಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ತಲ್ಲೂರು ಹಾಲು ಉತ್ಪಾದಕರ ಸಂಘದ ಸ್ಥಾಪಕಾಧ್ಯಕ್ಷರಾಗಿ, ತಲ್ಲೂರು ಸಮುದಾಯ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವ ಹಿಸಿದ್ದರು.

ಮೃತರ ನಿಧನಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ, ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ, ಉಪಾಧ್ಯಕ್ಷ ಗಿರೀಶ್, ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಉದಯ ಕುಮಾರ್ ತಲ್ಲೂರು, ಮಾಜಿ ಗ್ರಾಪಂ ಅಧ್ಯಕ್ಷ ಆನಂದ ಬಿಲ್ಲವ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಹೆಮ್ಮಾಡಿ ಮೂರ್ತೇದಾರರ ಸಂಘದ ಆಡಳಿತ ವ್ಯವಸ್ಥಾಪಕ ಕೃಷ್ಣ ಬಿ., ರೈತ ಸಂಘದ ಮುಖಂಡ ಶರತ್ ಕುಮಾರ್ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)