varthabharthi


ದಕ್ಷಿಣ ಕನ್ನಡ

ಕಲ್ಲಡ್ಕ: ಜ್ವರದಿಂದ ಆರು ವರ್ಷದ ಬಾಲಕಿ ಮೃತ್ಯು

ವಾರ್ತಾ ಭಾರತಿ : 23 Jun, 2022

ಬಂಟ್ವಾಳ, ಜೂ.23: ತೀವ್ರ ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿಯ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಗುರುವಾರ ನಡೆದಿದೆ.‌

ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯಾ ಆಚಾರ್ಯ(6) ಮೃತ ಬಾಲಕಿ.

ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ‌ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)