ಬೆಂಗಳೂರು
ಬೆಂಗಳೂರು | ಕೆಲವು ಶೈಕ್ಷಣಿಕ ಸಂಸ್ಥೆಗಳ ಮೇಲೆ ಐಟಿ ದಾಳಿ
ವಾರ್ತಾ ಭಾರತಿ : 23 Jun, 2022

ಬೆಂಗಳೂರು, ಜೂ.23: ನಗರದ ಕೆಲವು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಮೇಲೆ ಗುರುವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದಲ್ಲಿರುವ ದಿವ್ಯಶ್ರೀ ಗ್ರೂಪ್, ರೇವಾ ಯುನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಸುಮಾರು 45ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)