ಕ್ರೀಡೆ
ಮುಂಬೈಯನ್ನು ಮಣಿಸಿ ಮೊದಲ ಬಾರಿ ರಣಜಿ ಟ್ರೋಫಿ ಜಯಿಸಿದ ಮಧ್ಯಪ್ರದೇಶ
ವಾರ್ತಾ ಭಾರತಿ : 26 Jun, 2022

ಬೆಂಗಳೂರು, ಜೂ.26: ಫೈನಲ್ ಹಣಾಹಣಿಯಲ್ಲಿ ಮುಂಬೈ ತಂಡವನ್ನು ಆರು ವಿಕೆಟ್ ಗಳ ಅಂತರದಿಂದ ಮಣಿಸಿದ ಮಧ್ಯಪ್ರದೇಶ ತಂಡ ಇದೇ ಮೊದಲ ಬಾರಿ ರಣಜಿ ಟ್ರೋಫಿಗೆ ಮುತ್ತಿಟ್ಟಿದೆ.
ಐದನೇ ಹಾಗೂ ಅಂತಿಮ ದಿನವಾದ ರವಿವಾರ 41 ಬಾರಿಯ ಚಾಂಪಿಯನ್ ಆಗಿರುವ ಮುಂಬೈ ತನ್ನ 2ನೇ ಇನಿಂಗ್ಸ್ ನಲ್ಲಿ 269 ರನ್ ಗೆ ಆಲೌಟಾಯಿತು. ಮಧ್ಯಪ್ರದೇಶದ ಗೆಲುವಿಗೆ 108 ರನ್ ಗುರಿ ನೀಡಿತು. ಗೆಲ್ಲಲು ಸುಲಭ ಸವಾಲು ಪಡೆದಿದ್ದ ಮಧ್ಯಪ್ರದೇಶ ಒಂದು ಹಂತದಲ್ಲಿ 66 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಗಳನ್ನು ಕಳೆದುಕೊಂಡಿತು. ಸ್ಪಿನ್ನರ್ ಶಮ್ಸ್ ಮುಲಾನಿ 2 ವಿಕೆಟ್ ಪಡೆದರು. ಅಂತಿಮವಾಗಿ ಮಧ್ಯಪ್ರದೇಶ 29.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ರನ್ ದಾಖಲಿಸಿತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)