varthabharthi


ದಕ್ಷಿಣ ಕನ್ನಡ

ಪೋಕ್ಸೊ ಪ್ರಕರಣ

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಾರ್ತಾ ಭಾರತಿ : 26 Jun, 2022

ಮುನಾಸಿರ್

ಉಪ್ಪಿನಂಗಡಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.

ಆರೋಪಿ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ ನಿವಾಸಿ ಮುನಾಸಿರ್ (21) ಎಂದು ಗುರುತಿಸಲಾಗಿದೆ.

ಈತ ಮೇ 30ರಂದು ಬಾಲಕಿಯನ್ನು ಶಾಲೆಗೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಈ ವಿಚಾರವನ್ನು ಯಾರಿಗಾದರು ತಿಳಿಸಿದರೆ ಸಾಯಿಸುತ್ತೇನೆಂದು ಬೆದರಿಕೆಯೊಡ್ಡಿರುವುದಾಗಿ ಬಾಲಕಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಪೋಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಪ್ಪಿನಂಗಡಿ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)