varthabharthi


ದಕ್ಷಿಣ ಕನ್ನಡ

ಉಳ್ಳಾಲ ತಾಲೂಕು ಮಟ್ಟದ ಎಸ್ಸಿ-ಎಸ್ಟಿ ಸಭೆ

ವಾರ್ತಾ ಭಾರತಿ : 28 Jun, 2022

ಕೊಣಾಜೆ, ಜೂ.28: ಉಳ್ಳಾಲ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು  ಪಂಗಡದವರ ಕುಂದುಕೊರತೆ ಸಭೆಯು ಕೊಣಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

    ಉಳ್ಳಾಲ ತಹಶೀಲ್ದಾರ್ ಟಿ.ಜಿ.ಗುರುಪ್ರಸಾದ್  ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಶಾಸಕ ಯು.ಟಿ.ಖಾದರ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂಚಲಾಕ್ಷಿ, ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್, ಪ್ರಶಿಕ್ಷು ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್, ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಪರವಾಗಿ ಪ್ರದೀಪ್ ಡಿಸೋಜ, ಸಣ್ಣ ನೀರಾವರಿ ಇಲಾಖೆಯ ಆನಂದ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಮಾಲಿನಿ ಮೊದಲಾದವರು ಉಪಸ್ಥಿತರಿದ್ದರು.
ವೈದ್ಯಕೀಯ, ತೋಟಗಾರಿಕೆ, ಶಿಶು ಅಭಿವೃದ್ದಿ, ಶಿಕ್ಷಣ, ಸಣ್ಣ ನೀರಾವರಿ, ಸಮಾಜ ಕಲ್ಯಾಣ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರು, ದಲಿತ ಸಮಾಜದ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)