varthabharthi


ಕರ್ನಾಟಕ

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ವಾರ್ತಾ ಭಾರತಿ : 28 Jun, 2022

ಸಾಂದರ್ಭಿಕ ಚಿತ್ರ

ಮೈಸೂರು: ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ಮೈಸೂರು ಜಿಲ್ಲೆ ಟೀ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರಾಮೇಗೌಡನಪುರ ಗ್ರಾಮದ ಸರೋಜ (32) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು,  ಗೀತಾ(6), ಕುಸುಮ (4) ವರ್ಷದ ಮೃತ ಮಕ್ಕಳು ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಸರೋಜ ಆಗಮಿಸಿದ್ದರು.  ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳನ್ನು ಕೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಟೀ.ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬಾತನೊಂದಿಗೆ ಸರೋಜ ವಿವಾಹವಾಗಿದ್ದರು. ಗಂಡ ನಿಂಗರಾಜುವಿಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. 

ಈ ಸಂಬಂಧ ಟೀ.ನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)