ರಾಷ್ಟ್ರೀಯ
ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಹೃದಯಾಘಾತದಿಂದ ಮೃತ್ಯು
ವಾರ್ತಾ ಭಾರತಿ : 1 Aug, 2022

ವಾರಣಾಸಿ: ಜ್ಞಾನವಾಪಿ-ಶೃಂಗಾರ್ ಗೌರಿ ಕಾಂಪ್ಲೆಕ್ಸ್ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ಇಲ್ಲಿ ತಿಳಿಸಿವೆ. ಅವರಿಗೆ 62 ವರ್ಷ ವಯಸ್ಸಾಗಿತ್ತು
ಅಭಯ್ ನಾಥ್ ಯಾದವ್ ಅವರು ರವಿವಾರ ರಾತ್ರಿ ನಿಧನರಾಗಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಯಾದವ್, ಪ್ರಕರಣದಲ್ಲಿ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸುವ ಪ್ರಮುಖ ವಕೀಲರಾಗಿದ್ದರು.
ಅಲಹಾಬಾದ್ ಹೈಕೋರ್ಟ್ ಕಳೆದ ವಾರ ಹಿಂದೂ ಅರ್ಜಿದಾರರ ಪೂಜೆಯ ಹಕ್ಕನ್ನು ಕೋರಿ 1991 ರ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿತ್ತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)