ಕ್ರೀಡೆ
ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಸೋಲು
ಕಾಮನ್‌ವೆಲ್ತ್ ಗೇಮ್ಸ್: ಭಾರತದ ಪುರುಷರ ಹಾಕಿ ತಂಡಕ್ಕೆ ಬೆಳ್ಳಿ

Photo:twitter
ಬರ್ಮಿಂಗ್‌ಹ್ಯಾಮ್, ಆ.8: ಭಾರತದ ಪುರುಷರ ಹಾಕಿ ತಂಡ ಕಾಮನ್‌ವೆಲ್ತ್ ಗೇಮ್ಸ್ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ 0-7 ಗೋಲುಗಳ ಅಂತರದಿಂದ ಸೋಲುಂಡಿದೆ. ಇದರೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದೆ.
ಆರು ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯ ಪಂದ್ಯದುದ್ದಕ್ಕೂ ಪ್ರಾಬಲ್ಯ ಸಾಧಿಸಿದೆ. 7ನೇ ಕಾಮನ್‌ವೆಲ್ತ್ ಗೇಮ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಭಾರತವು ಸೆಮಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 3-2 ಅಂತರದಿಂದ ಮಣಿಸಿ ಫೈನಲ್‌ಗೆ ತಲುಪಿತ್ತು. 1998ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಹಾಕಿಯನ್ನು ಪರಿಚಿಯಿಸಿದ ಬಳಿಕ ನಡೆದ ಎಲ್ಲ 7 ಆವೃತ್ತಿಗಳಲ್ಲಿ ಆಸ್ಟ್ರೇಲಿಯ ಚಾಂಪಿಯನ್ ಪಟ್ಟಕ್ಕೇರಿದೆ. ಇದೇ ವೇಳೆ ಭಾರತವು 2010, 2014 ಹಾಗೂ 2022ರಲ್ಲಿ ಮೂರು ಬಾರಿ ಫೈನಲ್‌ಗೆ ತಲುಪಿದ್ದು, ಮೂರೂ ಬಾರಿ ಆಸ್ಟ್ರೇಲಿಯಕ್ಕೆ ಸೋತಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ