varthabharthi


ಉಡುಪಿ

ಉಡುಪಿ; ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ವಾರ್ತಾ ಭಾರತಿ : 12 Aug, 2022

ಉಡುಪಿ, ಆ.12: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ, ೧೯೪೭ರ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಕುರಿತ ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್. ಶುಕ್ರವಾರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕರಾದ ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು  ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)