varthabharthi


ಉಡುಪಿ

ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾ ಭಾರತಿ : 14 Aug, 2022

ಉಡುಪಿ : ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ರವಿವಾರ ರಾಜಾಂಗಣದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ವರದರಾಜ ಭಟ್, ಗೋಪಾಲಕೃಷ್ಣ ಉಪಾಧ್ಯಾಯ, ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗೆ ಚಾಲನೆ: ಪರ್ಯಾಯ ಕೃಷ್ಣಾಪುರ ಮಠ, ಶ್ರೀಕೃಷ್ಣಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಏರ್ಪಡಿಸ ಲಾದ ವಿವಿಧ ಸ್ಪರ್ಧೆಗಳಿಗೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು.

ಮೊದಲ ದಿನ ರಂಗೋಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ವರದ ರಾಜ ಭಟ್, ಗೋಪಾಲಕೃಷ್ಣ ಉಪಾಧ್ಯಾಯ, ಕಾರ್ಯಕ್ರಮದ ಸಂಚಾಲಕ ವಿಷ್ಣುಪ್ರಸಾದ್ ಪಾಡಿಗಾರ್ ಹಾಗೂ ಕಾರ್ಯಕ್ರಮದ ಸಂಯೋಜಕರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)