ಉಪ್ಪಿನಂಗಡಿ; ಹನಿಟ್ರ್ಯಾಪ್ ಆರೋಪ: ದೂರು ದಾಖಲು
ಸಾಂದರ್ಭಿಕ ಚಿತ್ರ
ಉಪ್ಪಿನಂಗಡಿ: ಅಶ್ಲೀಲ ಮಾತುಗಳೊಂದಿಗೆ ಮೊಬೈಲ್ ಕರೆ ಮಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಉಪ್ಪಿನಂಗಡಿಯ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೋರ್ವರಿಗೆ ಮೊಬೈಲ್ ಕರೆ ಮಾಡಿದ ಮಹಿಳೆಯೋರ್ವರು ತೀರಾ ಮುಜುಗರವೆನಿಸುವ ರೀತಿಯಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾಳೆನ್ನಲಾಗಿದ್ದು, ಆಕೆಯ ಈ ನಡೆಗೆ ವಿರೋಧ ವ್ಯಕ್ತಪಡಿಸಿದರೂ 3-4 ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದಾಗ ಇದೊಂದು ಬ್ಲ್ಯಾಕ್ ಮೇಲ್ ಜಾಲದ ಕೃತ್ಯವೆಂದು ಶಂಕಿಸಿ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ದೂರು ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Next Story