ಮಂಗಳೂರು, ಸೆ.19: ನಗರ ಹೊರವಲಯದ ಕಲಾಯಿ ನಿವಾಸಿ ಅಬ್ದುಲ್ ರಹ್ಮಾನ್ ಯಾನೆ ಬೀಡಿ ಅದ್ದಾಕ (75) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ತನ್ನ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರು ಕಲಾಯಿಯ ಮದೀನ ಜುಮ್ಮಾ ಮಸ್ಜಿದ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.