varthabharthi


ಅಂತಾರಾಷ್ಟ್ರೀಯ

ಇರಾನ್ : 700ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ

ವಾರ್ತಾ ಭಾರತಿ : 25 Sep, 2022

ಟೆಹ್ರಾನ್, ಸೆ.24: ಪೊಲೀಸ್ ಕಸ್ಟಡಿಯಲ್ಲಿ ಯುವತಿ ಮೃತಪಟ್ಟಿರುವುದನ್ನು ಖಂಡಿಸಿ ಕಳೆದ ಒಂದು ವಾರದಿಂದ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭ ಗುಯಿಲಾನ್ ಪ್ರಾಂತದಲ್ಲೇ 60 ಮಹಿಳೆಯರ ಸಹಿತ 700ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ ಎಂದು ತಸ್ನೀಮ್ ಸುದ್ಧಿಸಂಸ್ಥೆ ಶನಿವಾರ ವರದಿ ಮಾಡಿದೆ.

 ಪ್ರತಿಭಟನೆಯನ್ನು ಹತ್ತಿಕ್ಕಲು ಇರಾನ್‌ನ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇದುವರೆಗೆ 50ಕ್ಕೂ ಅಧಿಕ ಮಂದಿ ಹತರಾಗಿದ್ದಾರೆ ಎಂದು ಇರಾನ್ ಹ್ಯೂಮನ್ ರೈಟ್ಸ್ ಎಂಬ ಎನ್‌ಜಿಒ ಸಂಸ್ಥೆ ಹೇಳಿದೆ. ಈ ಮಧ್ಯೆ, ಸರಕಾರ ವಿರೋಧಿ ಪ್ರತಿಭಟನೆಯ ವಿರುದ್ಧ ಅನಗತ್ಯ ಮತ್ತು ಅಸಮ ಬಲ ಪ್ರಯೋಗಿಸಬಾರದು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಇರಾನ್ ಭದ್ರತಾ ಪಡೆಗಳಿಗೆ ಮನವಿ ಮಾಡಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಯ ವಿರುದ್ಧ ಅತಿಯಾದ ಬಲಪ್ರಯೋಗ ಮತ್ತು ಅದರಿಂದ ಹಲವಾರು ಸಾವುನೋವಿನ ವರದಿಯಿಂದ ಕಳವಳಗೊಂಡಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಗೌರವಿಸುವಂತೆ ಅಧಿಕಾರಿಗಳಿಗೆ ಕರೆ ನೀಡುತ್ತೇವೆ ಎಂದು ಗುಟೆರಸ್ ಅವರ ವಕ್ತಾರ ಸ್ಟೀಫನ್ ಡ್ಯುಜೆರಿಕ್ ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)