varthabharthi


ಬೆಂಗಳೂರು

ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾ ಭಾರತಿ : 29 Sep, 2022

ಬೆಂಗಳೂರು: ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)