varthabharthi


ಬೆಂಗಳೂರು

ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ‌

ವಾರ್ತಾ ಭಾರತಿ : 6 Oct, 2022

ಬೆಂಗಳೂರು, ಅ. 06: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್  ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು  ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ   ತಾಲ್ಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನಚರಿತ್ರೆಯನ್ನು ಬಿಂಬಿಸುವ   ವೀಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದರು.

ಕೆಂಪೇಗೌಡರ  ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ: ಸಿ.ಎನ್.ಅಶ್ವತ್ಥ್‍ನಾರಾಯಣ್, ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)