varthabharthi


ಮಾಹಿತಿ - ಮಾರ್ಗದರ್ಶನ

ಕ್ರೀಡಾ ತರಬೇತುದಾರರಿಂದ ಅರ್ಜಿ ಆಹ್ವಾನ

ವಾರ್ತಾ ಭಾರತಿ : 19 Nov, 2022

ಬೆಂಗಳೂರು, ನ. 18: ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಕ್ರೀಡಾ ತರಬೇತುದಾರರನ್ನು ರಾಮನಗರ, ಯಾದಗಿರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ, ಬೆಳಗಾವಿ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸಲುವಾಗಿ 2023ರ ಸೆಪ್ಟಂಬರ್ ಅಂತ್ಯದ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಕಿ, ಅಥ್ಲೆಟಿಕ್ಸ್, ಫುಟ್ಬಾಲ್, ಕುಸ್ತಿ ಕ್ರೀಡೆಗಳು ಸೇರಿದಂತೆ ಒಟ್ಟು ಆರು ತರಬೇತುದಾರರಿಂದ ಅರ್ಜಿ ಆಹ್ವಾನಿಸಿದ್ದು, ತರಬೇತುದಾರರಿಗೆ ಮಾಸಿಕ ಸಂಚಿತ ವೇತನ 39,960 ರೂ.ಗಳನ್ನು ನೀಡಲಾಗುವುದು. ತರಬೇತುದಾರರು ಪದವಿ ಮತ್ತು ರಾಷ್ಟ್ರೀಯ ಕ್ರೀಡಾ ಶಿಕ್ಷಣ/ಭಾರತೀಯ ಕ್ರೀಡಾ ಪ್ರಾಧಿಕಾರ ಸಂಸ್ಥೆಯಿಂದ ಆಯಾ ಕ್ರೀಡೆಯಲ್ಲಿ 1 ವರ್ಷದ ಅವಧಿ ತರಬೇತಿಯಲ್ಲಿ ಡಿಪ್ಲೋಮಾ ಪಡೆದಿರಬೇಕು/ಏಷಿಯನ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಪಡೆದಿರಬೇಕು/ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿರಬೇಕು.

ಅರ್ಜಿ ಮತ್ತು ಇನ್ನಿತರೆ ಪೂರಕ ದಾಖಲೆಗಳನ್ನು ನ.30ರ ಸಂಜೆ 4 ಗಂಟೆಯೊಳಗೆ ಮಹಾನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಡಿ.12ರಂದು ಸಂದರ್ಶನ ನಡೆಸಲಾಗುವುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವೆಬ್‍ಸೈಟ್ www.dyes.karnataka.gov.in  ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)