varthabharthi


ಗಲ್ಫ್ ಸುದ್ದಿ

ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರಿಗೆ 'ಅಂತಾರಾಷ್ಟ್ರೀಯ ವಿಶ್ವ ಮಾನ್ಯ' ಪ್ರಶಸ್ತಿಯ ಗೌರವ

ವಾರ್ತಾ ಭಾರತಿ : 21 Nov, 2022

ದುಬೈ: ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಕನ್ನಡಿಗರು ದುಬೈ ಸಹಯೋಗದೊಂದಿಗೆ ಇತ್ತೀಚೆಗೆ ನಡೆಯಿತು.

ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ ಹಿದಾಯತ್ ಅಡ್ಡೂರ ಕೋವಿಡ್ ಸಂದರ್ಭದಲ್ಲಿ ದುಬೈನಲ್ಲಿ ಕೋವಿಡ್ ವಾರಿಯರ್ ಆಗಿ ಮುಂಚೂಣಿಯಲ್ಲಿ ನಡೆಸಿದ ಸೇವೆಯನ್ನು ಹಾಗೂ ಕನ್ನಡ ಪರ ಸೇವೆಯನ್ನು ಗುರುತಿಸಿ 'ಅಂತಾರಾಷ್ಟ್ರೀಯ ವಿಶ್ವ ಮಾನ್ಯ' ಪ್ರಶಸ್ತಿಯನ್ನು  ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ನೀಡಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಶೇಕ್ ಮಜೀದ್ ರಾಶದ್ ಅಲ್ ಮುಲ್ಲಾ ಅವರ ಸಿಒಒ ಕಬೀರ್ ಕೆವಿ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ ಸೋಮಶೇಖರ್, ಕರ್ನಾಟಕ ಪ್ರೆಸ್ ಕೌನ್ಸಿಲ್ ಕ್ಲಬ್ ಅಧ್ಯಕ್ಷರಾದ ಡಾ. ಶಿವಕುಮಾರ್ ನಾಗರನವಿಲೆ, ಸದನ್ ದಾಸ್ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)