varthabharthi


ಕರ್ನಾಟಕ

ಚಾರ್ಮಾಡಿ | ಆ್ಯಂಬುಲೆನ್ಸ್ - ಆಟೋ ನಡುವೆ ಅಪಘಾತ: ನಾಲ್ಕು ಮಂದಿಗೆ ಗಾಯ

ವಾರ್ತಾ ಭಾರತಿ : 24 Nov, 2022

ಚಿಕ್ಕಮಗಳೂರು: ಆ್ಯಂಬುಲೆನ್ಸ್ ಹಾಗೂ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ  ಚಾರ್ಮಾಡಿ ಘಾಟಿ ಬಳಿ ವರದಿಯಾಗಿದೆ.

ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ ಎಂದು  ಹೇಳಲಾಗಿದೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಆಟೋಗೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. 

ಘಟನೆಯಿಂದ ಆಟೋದಲ್ಲಿದ್ದ ನಾಲ್ವರು  ಗಾಯಗೊಂಡಿದ್ದು, ಗಾಯಾಳುಗಳನ್ನು ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಬಣಕಲ್ ನ ಆಟೋ ಉಜಿರೆಯಿಂದ ಕೊಟ್ಟಿಗೆಹಾರದತ್ತ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)