ಕರ್ನಾಟಕ
ಈ ಬಾರಿಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
ಗದಗ-ರೋಣ ಕ್ಷೇತ್ರದ ಮಾಜಿ ಶಾಸಕ ಶ್ರಿಶೈಲಪ್ಪ ಬಿದರೂರು ನಿಧನ

ಗದಗ/ರೋಣ: ಗದಗ ಹಾಗೂ ರೋಣ ಕ್ಷೇತ್ರದ ಮಾಜಿ ಶಾಸಕ ಶ್ರಿಶೈಲಪ್ಪ ಬಿದರೂರು ಶುಕ್ರವಾರ ಬೆಂಗಳೂರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿರುವುದಾಗಿ ವರದಿಯಾಗಿದೆ.
ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಶ್ರೀಶೈಲಪ್ಪ ಬಿದರೂರು ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಅಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
1998ರಲ್ಲಿ ರೋಣ ಕ್ಷೇತ್ರದಿಂದ ಜನತಾ ಪಕ್ಷದ ಶಾಸಕರಾಗಿ ಗೆಲುವು ಸಾಧಿಸಿದ್ದ ಶ್ರೀಶೈಲಪ್ಪ ಬಿದರೂರು, 2008ರಲ್ಲಿ ಬಿಜೆಪಿಯಿಂದ ಗದಗ ಕ್ಷೇತ್ರದಿಂದ ಶಾಸಕರಾಗಿದ್ದರು.
My homage to Former MLA, Sh. Shrishailappa Bidarur, who expired from a massive heart attack today and heartfelt condolences to the family members, friends and all the supporters. ऊँ शांति। pic.twitter.com/aKU0VnPhNs
— Randeep Singh Surjewala (@rssurjewala) November 25, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ