ಬೆಂಗಳೂರು
ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ಸಾಂದರ್ಭಿಕ ಚಿತ್ರ
ಬೆಂಗಳೂರು, ನ. 25: ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಇಲ್ಲಿನ ಮಾದನಾಯಕನ ಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಜರಾಜನ್ ಬಂಧಿತ ಆರೋಪಿಯಾಗಿದ್ದು, ಈತ ಗುಂಡೇಟಿನಿಂದ ಗಾಯಗೊಂಡು ಸ್ಥಳೀಯಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದಪಾರಾಗಿದ್ದಾನೆ.ಇನ್ನೂ ಆರೋಪಿ ನಡೆಸಿದ ಹಲ್ಲೆಯಿಂದಪೇದೆ ಖಾಜಾ ನಾಮ್ದರ್ ಎಡಗೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಸನಪುರ ಹೋಬಳಿಯ ಮಾಚೋಹಳ್ಳಿ ಬಳಿ ನ.15ರಂದು ನಡೆದ ರೌಡಿ ಶೀಟರ್ ನಟರಾಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜನ್ ಸೇರಿ ಇಬ್ಬರನ್ನು ಎರಡುದಿನಗಳ ಹಿಂದೆ ಬಂಧಿಸಲಾಗಿತ್ತು. ಆನಂತರ, ಶುಕ್ರವಾರ ಮುಂಜಾನೆ ಸ್ಥಳ ಮಹಜರ್ಗೆ ತೆರಳಿದ್ದ ಸಂದರ್ಭದಲ್ಲಿಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಹುಡುಕಿ ತೆಗೆದರಾಜರಾಜನ್ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ.
ಈಸಂದರ್ಭದಲ್ಲಿ ಪೇದೆ ಖಾಜಾ ನಾಮ್ದಾರ್ ಎಡಗೈಗೆತೀವ್ರತರವಾದ ಗಾಯವಾಗಿದೆ. ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್.ಮಂಜುನಾಥ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಅದು ಆರೋಪಿಯ ಎಡಗಾಲಿಗೆ ತಗುಲಿ ಸ್ಥಳದಲ್ಲಿಯೇಕುಸಿದು ಬಿದ್ದಿದ್ದಾನೆ. ಆನಂತರ, ಆತನನ್ನು ಬಂಧಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮಾಂತರ ಎಸ್ಪಿ ಬಾಲದಂಡಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ