varthabharthi


ಬೆಂಗಳೂರು

ಸಂವಿಧಾನ ದಿನಾಚರಣೆ: ಸಿಎಂರಿಂದ ಸರಕಾರಿ ನೌಕರರಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧನೆ

ವಾರ್ತಾ ಭಾರತಿ : 26 Nov, 2022

ಬೆಂಗಳೂರು, ನ.26: ಸಂವಿಧಾನ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಸರಕಾರಿ ನೌಕರರಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮೊದಲಾದವರು ಹಾಜರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)