varthabharthi


ಬೆಂಗಳೂರು

ಮುಖ್ಯಮಂತ್ರಿ ಕಚೇರಿಯಲ್ಲಿ ಕಡತ ನಾಪತ್ತೆ ಆರೋಪ ಆಧಾರ ರಹಿತ: ಇಲಾಖೆಯ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ

ವಾರ್ತಾ ಭಾರತಿ : 27 Nov, 2022

ಬೆಂಗಳೂರು, ನ.27:ಮುಖ್ಯಮಂತ್ರಿ ಕಚೇರಿಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಮಹತ್ವದ ಕಡತ ನಾಪತ್ತೆ ಪ್ರಕರಣ ಸಂಬಂಧ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸ್ಪಷ್ಟನೆ ನೀಡಿದ್ದು, ಈ ಆರೋಪವು ಆಧಾರರಹಿತ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಬಿಎಂಪಿ ಜಾಹೀರಾತು ನೀತಿ ಬಗ್ಗೆ ಹೆಚ್ಚುವರಿ ಸ್ಪಷ್ಟೀಕರಣ ಕೋರಿ ಮುಖ್ಯಮಂತ್ರಿ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಕಡತಗಳು ಸಿಎಂ ಕಚೇರಿಯಲ್ಲಾಗಲಿ, ಸಚಿವರುಗಳ ಕಚೇರಿಯಲ್ಲಾಗಲಿ ನಾಪತ್ತೆಯಾಗಿಲ್ಲ. ನಗರಾಭಿವೃದ್ಧಿ ಇಲಾಖೆ ಬಳಿ ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)