ಬೆಂಗಳೂರು
ಬೆಂಗಳೂರು | ಮಹಿಳೆಯ ಮೃತದೇಹ ಪತ್ತೆ: ಪತಿ ಸೇರಿ ಮೂವರು ಪೊಲೀಸ್ ವಶಕ್ಕೆ
ವಾರ್ತಾ ಭಾರತಿ : 28 Nov, 2022
ಸಾಂದರ್ಭಿಕ ಚಿತ್ರ
ಬೆಂಗಳೂರು, ನ. 28: ಇಲ್ಲಿನ ಗುರಪ್ಪನಪಾಳ್ಯದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮಹಿಳೆಯನ್ನು ಖತೀಝಾ(32) ಎಂದು ಗುರುತಿಸಲಾಗಿದೆ. ಪತಿಯ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.
ಪತ್ನಿಯನ್ನು ಕೊಲೆಗೈದು ನೇಣು ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪತಿ ಮೆಹಬೂಬ್ ಶರೀಫ್, ಮಾವ ಹಾಗೂ ನಾದಿನಿಯನ್ನು ಸದುಗುಂಟೆ ಪಾಳ್ಯ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)