varthabharthi


ದಕ್ಷಿಣ ಕನ್ನಡ

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಎನ್‌ಐಎಯಿಂದ ಆರೋಪಿಯ ವಿಚಾರಣೆ?

ವಾರ್ತಾ ಭಾರತಿ : 30 Nov, 2022

ಮಂಗಳೂರು(Mangaluru): ನಗರದ ಗರೋಡಿಯಲ್ಲಿ ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್‌ ಶಾರಿಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲು ವೈದ್ಯರ ತಂಡ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಹೇಳಲಾಗಿದೆ. ಅದರಂತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಪ್ರಕರಣವು ಎನ್‌ಐಎಗೆ ಹಸ್ತಾಂತರವಾಗಿದ್ದು, ಸಂಸ್ಥೆಯ ಅಧಿಕಾರಿಗಳ ತಂಡವು ನಗರಕ್ಕೆ ಬಂದಿದೆ. ಸ್ಥಳೀಯ ಪೊಲೀಸ್‌ ಅಧಿಕಾರಿಗಳ ನೆರವು ಪಡೆದ ತಂಡವು ಆರೋಪಿಯನ್ನು ಕೆಲ ಕಾಲ ವಿಚಾರಣೆಗೆ ಒಳಪಡಿಸಿದೆ’ ಎಂದು ಮೂಲಗಳು ಹೇಳಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)