varthabharthi


ಕರ್ನಾಟಕ

ದಲಿತ ಯುವಕನ ಮೇಲೆ ದೌರ್ಜನ್ಯ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ವಾರ್ತಾ ಭಾರತಿ : 2 Dec, 2022

ಬೆಂಗಳೂರು, ಡಿ. 2: ದಲಿತರ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಆದುದರಿಂದ ಕೋಲಾರದಲ್ಲಿ ಬೈಕ್ ಹಿಂದಿಕ್ಕಿದ ಕಾರಣಕ್ಕೆ ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ‘ಕೋಲಾರದ ನಂಗಲಿ ಗ್ರಾಮದ ಪರಿಶಿಷ್ಟ ಜಾತಿಯ ಉದಯ್‍ಕಿರಣ್ ಎಂಬ ಯುವಕನ ಮೇಲೆ ಸರ್ವಣೀಯರು ದೌರ್ಜನ್ಯ ನಡೆಸಿದ್ದು, ಇದರಿಂದ ಮನನೊಂದ ಉದಯ್ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಕ್ರಮಕ್ಕೆ ಸೂಚಿಸಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಳಬಾಗಿಲು | ಬೈಕ್‌ ಹಿಂದಿಕ್ಕಿದಕ್ಕೆ ಮರಕ್ಕೆ ಕಟ್ಟಿ ಹಲ್ಲೆ; ನೊಂದ ದಲಿತ ಯುವಕ ಆತ್ಮಹತ್ಯೆ: ಆರೋಪ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)