varthabharthi


ಗಲ್ಫ್ ಸುದ್ದಿ

ಮಸ್ಕತ್: ಬ್ಯಾಡ್ಮಿಂಟನ್ ಆಡುವಾಗಲೇ ಕುಸಿದು ಬಿದ್ದು ಭಾರತ ಮೂಲದ ವ್ಯಕ್ತಿ ನಿಧನ

ವಾರ್ತಾ ಭಾರತಿ : 10 Jan, 2023

ಮಸ್ಕತ್ (ಒಮನ್): ಬ್ಯಾಡ್ಮಿಂಟನ್ (badminton) ಪಂದ್ಯವೊಂದರಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಸ್ಕತ್‌ನ (Muscat) ನಡೆದಿದೆ ಎಂದು freepressjournal.in ವರದಿ ಮಾಡಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬ್ಯಾಡ್ಮಿಂಟನ್ ಪಂದ್ಯವಾಡುತ್ತಿದ್ದ ವ್ಯಕ್ತಿಯೊಬ್ಬ ದಿಢೀರನೆ ಕುಸಿದು ಬಿದ್ದಿರುವುದು ಅದರಲ್ಲಿ ಸೆರೆಯಾಗಿದೆ. ನರೇಂದ್ರ ನಾಥ್ ಮಿಶ್ರಾ ಎಂಬ ಪತ್ರಕರ್ತರೊಬ್ಬರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅವರು ಅಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ವಿಡಿಯೊವನ್ನು "ದಿಢೀರ್ ಸಾವಿನ ಪ್ರವೃತ್ತಿ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತೀಯ ಮೂಲದ ವ್ಯಕ್ತಿಯೊಬ್ಬರು ಆಡುವಾಗಲೇ ಮಸ್ಕತ್‌ನ ಬ್ಯಾಡ್ಮಿಂಟನ್ ಅಂಗಳದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ" ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಆ ವಿಡಿಯೊದಲ್ಲಿ ಕ್ರೀಡಾ ದಿರಿಸು ಧರಿಸಿರುವ ವ್ಯಕ್ತಿಯೊಬ್ಬರು ಉತ್ಸಾಹದಿಂದ ಆಡುತ್ತಿದ್ದ ಅವರು ಕೆಲವೇ ಸೆಕೆಂಡುಗಳಲ್ಲಿ ಹೃದಯಾಘಾತದಿಂದ ಕುಸಿದು ಬೀಳುವುದು ಸೆರೆಯಾಗಿದೆ.

ಕೋವಿಡ್-19 ಸಾಂಕ್ರಾಮಿಕದ ನಂತರ ದಿಢೀರ್ ಹೃದಯಾಘಾತಗಳು ಆಘಾತಕಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈ ಪ್ರವೃತ್ತಿಯು ಹೃದಯ ತಜ್ಞರ ಕಳವಳಕ್ಕೆ ಕಾರಣವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)