ದಕ್ಷಿಣ ಕನ್ನಡ
ವಿಟ್ಲ: ಮಹಿಳೆ ಆತ್ಮಹತ್ಯೆ
ವಾರ್ತಾ ಭಾರತಿ : 28 Jan, 2023

ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿಯವರ ಪತ್ನಿ ಶಾಲಿನಿ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಶಾಲಿನಿ ಅವರ ಪತಿ ಕೆಲ ವರ್ಷಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಇಂದು ಬೆಳಿಗ್ಗೆ ಶಾಲಿನಿಯವರು ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಸಂಬಂಧಿಕರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಿದಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)