varthabharthi


ಕರ್ನಾಟಕ

ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಚುನಾವಣಾ ಪರಿಶೀಲನಾ ಸಮಿತಿ ರಚನೆ ಮಾಡಿದ ಕಾಂಗ್ರೆಸ್

ವಾರ್ತಾ ಭಾರತಿ : 6 Feb, 2023

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಚುನಾವಣಾ ಪರಿಶೀಲನಾ ಸಮಿತಿ ರಚಿಸಿ ಎಐಸಿಸಿ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ. 

ಮೋಹನ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಈ ನೂತನ ಸಮಿತಿ ರಚನೆ ಮಾಡಲಾಗಿದೆ.

ನೀರಜ್ ಡಾಂಗಿ, ಮಹಮ್ಮದ್ ಜಾವೇದ್ ಮತ್ತು ಸಪ್ತಗಿರಿ ಉಳಾಕ ಸದಸ್ಯರಾಗಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ,  ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹಾಗೂ ರಾಜ್ಯದ ಉಸ್ತುವಾರಿಗಳಾಗಿರುವ ಎಐಸಿಸಿ ಕಾರ್ಯದರ್ಶಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)