ರಾಷ್ಟ್ರೀಯ
ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಲಾಲು ಪ್ರಸಾದ್, ರಾಬ್ರಿ ದೇವಿ, ಮಿಸಾ ಭಾರ್ತಿಗೆ ಜಾಮೀನು

Photo: PTI
ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ ಹಾಗೂ ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ಸಿಬಿಐ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 29 ರಂದು ನಡೆಯಲಿದೆ.
ಮೂರು ತಿಂಗಳ ಹಿಂದೆ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ನಂತರ ಲಾಲು ಯಾದವ್ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾಗಲು ಗಾಲಿಕುರ್ಚಿಯಲ್ಲಿ ಬಂದರು.
ಮಾಜಿ ಮುಖ್ಯಮಂತ್ರಿಗಳಾದ ಲಾಲು ಯಾದವ್ ಹಾಗೂ ರಾಬ್ರಿ ದೇವಿ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಲಾಲು ಅವರ ಮಕ್ಕಳ ವಿರುದ್ಧ ಉದ್ಯೋಗಕ್ಕಾಗಿ ಜಮೀನು ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.
2004 ರಿಂದ 2009 ರವರೆಗೆ ಲಾಲು ಪ್ರಸಾದ್ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಲಾಲು ಯಾದವ್ ಅವರ ಕುಟುಂಬ ಸದಸ್ಯರು ಉದ್ಯೋಗಕ್ಕಾಗಿ ಭೂಮಿಯನ್ನು ಅಗ್ಗವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ಲಾಲು, ರಾಬ್ರಿ ಹಾಗೂ ಮಿಸಾ ಅವರನ್ನು ವಿಚಾರಣೆ ನಡೆಸಿತ್ತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ