varthabharthi


ನಿಧನ

ಎಂ.ಎ.ಮಹ್ಮೂದ್ ಹಾಜಿ

ವಾರ್ತಾ ಭಾರತಿ : 18 Mar, 2023

ಮಂಗಳೂರು, ಮಾ.18: ಪಾಂಡೇಶ್ವರ ನಿವಾಸಿ ಎಂ.ಎ.ಮಹ್ಮೂದ್ ಹಾಜಿ(75) ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ನಗರದ ಲೇನ್ ಮಸೀದಿ ಹಾಗೂ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದ ಮಹ್ಮೂದ್ ಹಾಜಿಯವರು ಬದ್ರಿಯಾ ಕಾಲೇಜಿನ ಆಡಳಿತ ಸಮಿತಿಯ ಸದಸ್ಯರಾಗಿ, ಹಜ್ ಕಮಿಟಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಐವರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ದಫನ ಕಾರ್ಯವು ಇಂದು(ಮಾ.18) ಸಂಜೆ 4:30ರ ಸುಮಾರಿಗೆ ಬಂದರ್ ಜುಮಾ ಮಸೀದಿಯ ವಠಾರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)