ಕರ್ನಾಟಕ
ವರುಣಾ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ

ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ
ಮೈಸೂರು: ತನ್ನ ತಂದೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ, ಆದರೆ ವರುಣಾ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧನಿದ್ದೇನೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನ್ನ ತಂದೆ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಅವರು ಸ್ಪರ್ಧೆ ಮಾಡುವುದಾದರೆ ವರುಣಾ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧ. ಅವರು ಸ್ಪರ್ಧೆ ಮಾಡಬೇಕು ಎಂದು ರಾಜ್ಯ ಹಲವಾರು ಕ್ಷೇತ್ರಗಳಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.
ಸಿದ್ಧರಾಮಯ್ಯ ಅವರಿಗೆ ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಾಗುತ್ತಿದೆ. ಹಾಗಾಗಿ ಅವರು ಎಲ್ಲಿ ನಿಲ್ಲುತ್ತಾರೊ ಅಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ