ಕರ್ನಾಟಕ
ಜೀವಂತ ಉರಿಗೌಡ, ನಂಜೇಗೌಡರ ಪಾಡೇನು?: ಎಚ್ಡಿಕೆ

ಬೆಂಗಳೂರು: ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡ ಹೆಸರುಗಳನ್ನು ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ, ಜೀವಂತ ಇರುವ ಉರಿಗೌಡ, ನಂಜೇಗೌಡ ಅವರನ್ನು ಕೋಮು ದಳ್ಳುರಿಯಲ್ಲಿ ಬೇಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಉರಿಗೌಡ, ನಂಜೇಗೌಡ ಇದ್ದರೋ ಇಲ್ಲವೋ ಗೊತ್ತಿಲ್ಲ. ಜೀವಂತ ಬದುಕಿರುವ ಉರಿಗೌಡ, ನಂಜೇಗೌಡರ ಬಗ್ಗೆ ಯೋಚಿಸಬೇಕು ಎಂದು ರೈತರ ಕುರಿತಾಗಿ. ಅಲ್ಲದೆ, ಈ ವಿಚಾರ ಈಗ ಅಪ್ರಸ್ತುತ. ಒಂದು ಸಮಾಜ, ಇನ್ನೊಂದು ಸಮಾಜ ಅನುಮಾನದಿಂದ ನೋಡುವಂತಾಗಿದೆ. ಬಿಜೆಪಿ ನೈತಿಕತೆ ಉಳಿಸಿಕೊಳ್ಳದೆ ಇದನ್ನು ಎತ್ತಿಕಟ್ಟುತ್ತಿದೆ ಎಂದು ಟೀಕಿಸಿದರು.
ಬಿಜೆಪಿಗೆ ನೈತಿಕತೆ ಇಲ್ಲ: ರೌಡಿಶೀಟರ್ ಸೈಲೆಂಟ್ ಸುನೀಲ, ಸ್ಯಾಂಟ್ರೋ ರವಿ, ಫೈಟರ್ ರವಿ ಸೇರಿದಂತೆ ಇನ್ನಿತರರು ಬಿಜೆಪಿಗೆ ಸೇರಿಕೊಳ್ಳೋದು. ಇವರಿಗೆ ಪ್ರಾಮುಖ್ಯತೆ ಕೊಡೋದು ಬೇಡ ಎನ್ನುವುದು ಅಭಿಪ್ರಾಯ ಎಂದ ಅವರು, ಬಿಜೆಪಿಯವರು ನೈತಿಕತೆ ಭಾಷಣ ಮಾಡುತ್ತಾರೆ. ಅದರ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಜನ ಇಂತವರ ಬಗ್ಗೆ, ಇಂಥ ಪಕ್ಷಗಳ ಬಗ್ಗೆ ಎಚ್ಚರವಾಗಿರಬೇಕು. ಯಾವುದೇ ಕಾರಣಕ್ಕೂ ಇಂಥವರಿಗೆ ಮತ ನೀಡಬಾರದು ಎಂದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ