ಅಂತಾರಾಷ್ಟ್ರೀಯ
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜಾಮೀನು
ವಾರ್ತಾ ಭಾರತಿ : 21 Mar, 2023

ಇಸ್ಲಮಾಬಾದ್, ಮಾ.21: ಭಯೋತ್ಪಾದನೆ ಆರೋಪ ದಾಖಲಾಗಿರುವ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಒಂದು ವಾರದ ಮಟ್ಟಿಗೆ ಜಾಮೀನು ಮಂಜೂರುಗೊಳಿಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ತನ್ನನ್ನು ಬಂಧಿಸಲು ಬಂದಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ತಡೆಯೊಡ್ಡುವಂತೆ ಮತ್ತು ಪ್ರತಿಭಟನೆ ನಡೆಸುವಂತೆ ಬೆಂಬಲಿಗರನ್ನು ಪ್ರಚೋದಿಸಿದ್ದ ಆರೋಪದಡಿ ಇಮ್ರಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)