varthabharthi


ಬೆಂಗಳೂರು

ಮಾಜಿ ಶಾಸಕ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ

ವಾರ್ತಾ ಭಾರತಿ : 22 Mar, 2023

ವೆಂಕಟಸ್ವಾಮಿ 

ಬೆಂಗಳೂರು, ಮಾ.22: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ‌ ವೆಂಕಟಸ್ವಾಮಿ ಅವರಿಗೆ  ಹೃದಯಾಘಾತವಾಗಿದ್ದು (heart attack), ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡ್ತಿದ್ದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ, ನಿನ್ನೆ ಪ್ರಚಾರ ಮುಗಿಸಿ ರಾತ್ರಿ ಮನೆಗೆ ಬಂದಿದ್ದಾಗ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ.

ಬಳಿಕ ಕುಟುಂಬಸ್ಥರು ಕೂಡಲೆ ಬೆಂಗಳೂರಿನ ಆಸ್ವತ್ರೆಗೆ ಕರೆದೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಆಸ್ವತ್ರೆಯಲ್ಲಿ ಬೆಳಗಿನಿಂದ ಚಿಕಿತ್ಸೆ ‌ನೀಡಿರುವ ವೈದ್ಯರು ಯಾವುದೇ ಅಪಾಯವಿಲ್ಲ ಎಂದು ಕುಟುಂಬಸ್ಥರಿಗೆ ತಿಳಿಸಿದ್ದು, ಸ್ಟಂಟ್ ಹಾಕಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆನ್ನಲಾಗಿದೆ.

ಮಾಜಿ ಶಾಸಕ‌ ವೆಂಕಟಸ್ವಾಮಿ  ಅವರು 2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದರು. ಇದೀಗ 2023 ರ ಚುನಾವಣೆಗೂ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ಗಾಗಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)