varthabharthi


ಬೆಂಗಳೂರು

ಚಿತ್ತಾಪುರದಲ್ಲಿ ಬಿಜೆಪಿ ಹೆಸರಿಲ್ಲದಂತೆ ಮಾಡುತ್ತೇವೆ: ಬಾಬುರಾವ್ ಚಿಂಚನಸೂರು

ವಾರ್ತಾ ಭಾರತಿ : 22 Mar, 2023

ಬಾಬುರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಡಿ.ಕೆ.ಶಿವಕುಮಾರ್ 

ಬೆಂಗಳೂರು, ಮಾ.22: ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ನೀಡುತ್ತೇನೆ. ಜತೆಗೆ ಚಿತ್ತಾಪುರದಲ್ಲಿ ಬಿಜೆಪಿ ಹೇಳಹೆಸರಿಲ್ಲದಂತೆ ಮಾಡುತ್ತೇವೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಮಾಜಿ ಸದಸ್ಯ ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ನಾನು ಅವಕಾಶವಾದಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನನಗೆ ತಂದೆ, ತಾಯಿ, ಮಕ್ಕಳಿಲ್ಲ. ನಾನು ಮತ್ತು ನನ್ನ ಪತ್ನಿ ಮಾತ್ರ ಇದ್ದೇವೆ. ಸುಮಾರು 30 ವರ್ಷಗಳಿಂಗ ಜನರ ಸೇವೆ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ದುಡಿದಿದ್ದೇನೆ ಎಂದರು.

ನಿಮ್ಮ ಜತೆ ಬಿಜೆಪಿ ಸೇರಿದ್ದವರನ್ನು ಕರೆ ತರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಅವರು, ‘2023 ರ ಚುನಾವಣೆಯಲ್ಲಿ ಯಾರು ಎಲ್ಲಿರುತ್ತಾರೆ ಎಂದು ಎಲ್ಲರಿಗೂ ತಿಳಿಯಲಿದೆ ಎಂದರು.

ಇನ್ನೂ, ಖರ್ಗೆ ಅವರ ಮೇಲೆ ಕೋಪಗೊಂಡು ನೀವು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಿರಿ ಎಂದು ಚಿಂಚನಸೂರು ಅವರನ್ನು ಕೇಳಿದಾಗ, ತಂದೆ ಮಗನ ಜಗಳ ಇದ್ದೇ ಇರುತ್ತದೆ. ಅದು ಈಗ ಸರಿ ಹೋಗಿದೆ ಎಂದು ಉತ್ತರಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)