varthabharthi


ಬೆಂಗಳೂರು

ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

ವಾರ್ತಾ ಭಾರತಿ : 23 May, 2023

ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ.ಖಾದರ್ ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು  ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. 

ಯು.ಟಿ ಖಾದರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)