varthabharthi


ದಕ್ಷಿಣ ಕನ್ನಡ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ; ತಪ್ಪಿದ ಭಾರೀ ದುರಂತ

ವಾರ್ತಾ ಭಾರತಿ : 25 May, 2023

ಮಂಗಳೂರು: ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿದೆ ಎಂದು ಗುರುವಾರ ಬೆಳಗ್ಗೆ ವರದಿಯಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತರಲಾಗಿದೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)