varthabharthi


ಕರ್ನಾಟಕ

ಸಂಪುಟ ವಿಸ್ತರಣೆ ಕಸರತ್ತು: ಇನ್ನೂ ಅಂತಿಮವಾಗಿಲ್ಲ ಸಚಿವರ ಪಟ್ಟಿ

ವಾರ್ತಾ ಭಾರತಿ : 25 May, 2023

Photo Credit - ANI

ಹೊಸದಿಲ್ಲಿ: ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್‌ ನಾಯಕರು ದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಆದರೆ ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ.

ಸಭೆ ಬಳಿಕ ಕಾರಿನಲ್ಲಿ  ಕರ್ನಾಟಕ ಭವನಕ್ಕೆ ತೆರಳಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇನ್ನೂ ಆಗಿಲ್ಲ ಎಂದು ಸನ್ನೆ ಮಾಡಿ ಹೊರಟರು.

ನಾಲ್ಕೈದು ಸಚಿವ ಸ್ಥಾನಗಳ ವಿಚಾರದಲ್ಲಿ ನಾಯಕರ ಮಧ್ಯೆ ಇನ್ನೂ ಒಮ್ಮತ ಮೂಡದ ಕಾರಣ ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಇತರ ನಾಯಕರು ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)