ರಾಷ್ಟ್ರೀಯ
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂಪಾಯಿಯ ವಿಶೇಷ ನಾಣ್ಯ ಬಿಡುಗಡೆ

Photo credit: timesnownews.com
ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂಪಾಯಿಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವವಾಗಿಯೂ ಕಾರ್ಯನಿರ್ವಹಿಸುತ್ತದೆ.
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದೆ., ಅದರ ಕೆಳಗೆ "ಸತ್ಯಮೇವ ಜಯತೆ" ಎಂಬ ಪದಗಳಿವೆ. ಎಡಭಾಗದಲ್ಲಿ "ಭಾರತ್" ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಹಾಗೂ ಬಲಭಾಗದಲ್ಲಿ "ಇಂಡಿಯಾ" ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ಈ. ನಾಣ್ಯದ ಇನ್ನೊಂದು ಬದಿಯು ಸಂಸತ್ತಿನ ಸಂಕೀರ್ಣದ ಚಿತ್ರವನ್ನು ತೋರಿಸುತ್ತದೆ. "ಸಂಸದ್ ಸಂಕುಲ್" ಪದಗಳನ್ನು ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಮತ್ತು ಕೆಳಗಿನ ಪರಿಧಿಯಲ್ಲಿ "ಪಾರ್ಲಿಮೆಂಟ್ ಕಾಂಪ್ಲೆಕ್ಸ್" ಅನ್ನು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ