varthabharthi


ಕರ್ನಾಟಕ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ

ವಾರ್ತಾ ಭಾರತಿ : 26 May, 2023

Photo - ಮಹಮ್ಮದ್- ಕುಡಚಿ ಮೃತ ವ್ಯಕ್ತಿ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ (ಗುರುವಾರ) ತಡರಾತ್ರಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಮಹಮ್ಮದ್ ಕುಡಚಿ ಎಂಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಧಾರವಾಡದ ಕಮಲಾಪುರದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಮಹಮ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.

ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿದ್ದಾನೆನ್ನಲಾಗಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)