varthabharthi

ದಿಲ್ಲಿಯಲ್ಲಿ ಆರೋಗ್ಯ ತುರ್ತುಪರಿಸ್ಥಿತಿ

ದಿಲ್ಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ವಾಯು ಗುಣಮಟ್ಟ ತೀರಾಹದಗೆಟ್ಟಿದ್ದು ಅಪಾಯಕಾರಿ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯನ್ನು ಘೋಷಿಸಿ ನವೆಂಬರ್ 5ರವರೆಗೆ ಎಲ್ಲಾ ನಿರ್ಮಾಣ ಕಾರ್ಯಗಳನ್ನು ನಿಷೇಧಿಸಲಾಗಿದೆ. ನವೆಂಬರ್ 5ರವರೆಗೆ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಇಪಿಸಿಎ)ಯ ಅಧಿಕಾರಿಗಳು ತಿಳಿಸಿದ್ದಾರೆ. ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಶಾಲೆಯೊಂದರಲ್ಲಿ ವಿದ್ಯಾರ್ಥಿಗೆ ಮಾಲಿನ್ಯ ನಿರೋಧಕ ಮಾಸ್ಕ್ ವಿತರಿಸಿದರು.

Comments (Click here to Expand)