varthabharthi

ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಉದ್ಘಾಟನೆ

ಕರ್ನಾಟಕ ಕಾರ್ಯನಿರತ ಪತ್ರ ಕರ್ತರ ಸಂಘದ ಆಶ್ರಯದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನವನ್ನು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಸಂಧ್ಯಾ ಎಸ್. ಪೈ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲೆಯ ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್‌ನ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯ ಅತಿಥಿಗಳಾಗಿದ್ದರು.

Comments (Click here to Expand)