varthabharthi

‘ಜನತಾ ಕರ್ಫ್ಯೂ’

ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನ ಭೀತಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ‘ಜನತಾ ಕರ್ಫ್ಯೂ’ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಕರಾವಳಿಯ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳು ಯಾವುದೇ ಚಟುವಟಿಕೆಗಳಿಲ್ಲದೆ ಸಂಪೂರ್ಣ ಸ್ತಬ್ಧವಾಗಿದ್ದವು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9 ಜಿಲ್ಲೆಗಳನ್ನು ಇಂದಿನಿಂದ ಮಾ.31 ರವರೆಗೂ ಲಾಕ್‌ಡೌನ್ ಮಾಡಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Comments (Click here to Expand)