varthabharthi

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರು

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಹಾಗೂ ಚಿತ್ರಹಿಂಸೆಗೆ ಒಳಗಾಗಿ ದಿಲ್ಲಿಯ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ಮೃತಪಟ್ಟಿರುವ 19ರ ಹರೆಯದ ದಲಿತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ಗುರುವಾರ ಉತ್ತರಪ್ರದೇಶದ ಹತ್ರಸ್ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಾಹನವನ್ನು ನೊಯ್ಡಾದ ಯಮುನಾ ಎಕ್ ಪ್ರೆಸ್ ವೇನಲ್ಲಿ ಅಧಿಕಾರಿಗಳು ತಡೆದರು. ರಾಹುಲ್ ತನ್ನ ಸಹೋದರಿ ಪ್ರಿಯಾಂಕಾ ಗಾಂಧಿ ಹಾಗೂ ಕಾರ್ಯಕರ್ತರೊಂದಿಗೆ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಪೊಲೀಸರು ಅವರನ್ನು ತಡೆದು ದೂಡಿ ಹಾಕಿರುವ ಘಟನೆಯೂ ನಡೆದಿದೆ.

Comments (Click here to Expand)